ಆಲಮೇಲ ಪ.ಪಂ ಫೈಟ್: ಮತದಾನ ಜೋರು

446

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಆಲಮೇಲ‌ ಪಟ್ಟಣ ಪಂಚಾಯ್ತಿಯ 19 ವಾರ್ಡ್ ಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮತದಾನ ನಡೆಯುತ್ತಿದೆ. ಮತದಾರ ಭರ್ಜರಿಯಾಗಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆ, ಗಂಡು ಮಕ್ಕಳ ಶಾಲೆ, ಉರ್ದು ಶಾಲೆ, ಅಂಜುಮಾ‌ನ್ ಶಾಲೆ, ಪಟ್ಟಣ ಪಂಚಾಯ್ತಿ ಕಾರ್ಯಾಲಯ ಸೇರಿದಂತೆ ವಿವಿಧ ಕಡೆ ಮತ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲೆಡೆ ಮತದಾನ ಬೀರುಸಿನಿಂದ ಕೂಡಿದೆ.

ಚುನಾವಣೆ ಕಣದಲ್ಲಿ 59 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ಡಿಸೆಂಬರ್ 30ರಂದು ಫಲಿತಾಂಶ ಪ್ರಕಟವಾಗಲಿದೆ. ಅಂದು ಇವರೆಲ್ಲರ ಮುಂದಿನ ರಾಜಕೀಯ ಭವಿಷ್ಯ ತಿಳಿಯಲಿದೆ.


TAG


Leave a Reply

Your email address will not be published. Required fields are marked *

error: Content is protected !!