ಆಂಬ್ಯುಲೆನ್ಸ್-ಲಾರಿ ಅಪಘಾತ: ನರ್ಸ್ ಗೆ ಗಂಭೀರ ಗಾಯ

462

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ಓರ್ವ ನರ್ಸ್ ತಲೆಗೆ ಗಂಭೀರ ಗಾಯವಾದ ಘಟನೆ ನಗರದಲ್ಲಿ ನಡೆದಿದೆ. ವಿಜಯಪುರ ಹೊರವಲಯದ ಆಕಾಶವಾಣಿ ಕೇಂದ್ರದ ಬಳಿ ಈ ಘಟನೆ ಕಳೆದ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಪಘಾತದಲ್ಲಿ ಇಎಂಟಿ ನರ್ಸ್ ತುಳಸಿ ತಲೆಗೆ ಗಂಭೀರ ಗಾಯವಾಗಿದೆ. ಅವರನ್ನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಯಾವುದೇ ಪ್ರಣಾಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಆದ್ರೆ, ಇದುವರೆಗೂ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಬಾರದೆ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಬಸವನಬಾಗೇವಾಡಿಯಿಂದ ಗರ್ಭಿಣಿಯನ್ನ ಜಿಲ್ಲಾಸ್ಪತ್ರೆಗೆ ಹೊರಟಿದ್ದಾಗ ಈ ಘಟನೆ ನಡೆದಿದೆ. ಚಾಲಕ ಶ್ರೀಶಲಗೂ ಸಣ್ಣ ಪುಟ್ಟಗಾಯಳಾಗಿವೆ. ಇನ್ನು ಗರ್ಭಿಣಿಗೂ ಯಾವುದೇ ಪ್ರಣಾಪಾಯವಾಗಿಲ್ಲವೆಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!