ಖಲಿಸ್ಥಾನ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಬಂಧನ

238

ಪ್ರಜಾಸ್ತ್ರ ಸುದ್ದಿ

ಮೊಗಾ: ಕಳೆದ ಸುಮಾರು 36 ದಿನಗಳಿಂದ ತಲೆಮರೆಸಿಕೊಂಡಿದ್ದ ಖಲಿಸ್ಥಾನ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ನನ್ನು ಇಂದು ಮುಂಜಾನೆ ಬಂಧಿಸಲಾಗಿದೆ. ಪಂಜಾಬಿನ ಮೊಗಾದಲ್ಲಿ, ವಾರಿಸ್ ಪಂಜಾಬ್ ದಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಂಜಾಬ್ ಪೊಲೀಸರು ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇತನ ಬಂಧನವಾಗಿದೆ. ಕಳೆದ ಮಾರ್ಚ್ 18ರಂದು ತಲೆಮರೆಸಿಕೊಂಡಿದ್ದ. ಕೆಲ ದಿನಗಳ ಹಿಂದೆ ಇತನ ಪತ್ನಿಯನ್ನು ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿತ್ತು. ಈಗ ಅಮೃತಪಾಲ್ ಸಿಂಗ್ ಬಂಧನ ಸಹ ಆಗಿದೆ.




Leave a Reply

Your email address will not be published. Required fields are marked *

error: Content is protected !!