ಆಂಧ್ರಾ ಮಾಜಿ ಸಿಎಂ ಬಿಜೆಪಿ ಸೇರ್ಪಡೆ

141

ಪ್ರಜಾಸ್ತ್ರ ಸುದ್ದಿ

ದೆಹಲಿ: ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣಕುಮಾರ್ ರೆಡ್ಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಸದ ಅರುಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ. ಈ ವೇಳೆ ಮಾತನಾಡಿದ ಅವರು, ತಪ್ಪು ನಿರ್ಧಾರ ತೆಗೆದುಕೊಂಡಿದ್ದೆ. ಅವರಿಗೆ ಬೆಲೆ ತೆತ್ತಿದ್ದೇನೆ. ಕಾಂಗ್ರೆಸ್ ಹೈಕಮಾಂಡ್ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಾಗಿ ಎಲ್ಲ ಕಡೆ ಸೋಲುತ್ತಿದೆ ಎಂದರು.

ಕಳೆದ 9 ವರ್ಷಗಳಲ್ಲಿ 2ನೇ ಬಾರಿಗೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದರು. ಮಾರ್ಚ್ 12ರಂದು ಕಾಂಗ್ರೆಸ್ ತೊರೆದ ಕೆಲ ದಿನಗಳ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ವಿಜಯವಾಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!