ಪ್ರಜಾಸ್ತ್ರ ಸುದ್ದಿ
ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಅಂಗನವಾಡಿ ಮೇಲ್ಛಾವಣಿ ಕುಸಿತು ಮೂವರು ಮಕ್ಕಳು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಅಂಗನವಾಡಿಯ ಫ್ಲಾಸ್ಟರ್ ಕುಸಿದು ಬಿದ್ದಿದೆ. ಇದರಿಂದಾಗಿ 10 ತಿಂಗಳ ಮಗು ಸೇರಿ ಮೂವರು ಮಕ್ಕಳು ಗಾಯಗೊಂಡಿದ್ದಾರೆ.
ಗಾಯಾಳು ಮಕ್ಕಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.