6ನೇ ತರಗತಿ, ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

119

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಪ್ರತಿಷ್ಠಿತ ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಪ್ರವೇಶಾತಿಗೆ ಸಂಬಂಧಿಸಿದಂತೆ 6ನೇ ತರಗತಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮೇ 21ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಇಲ್ಲಿಗೆ ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕ ಪುಂಡಲಿಕ ಮಾನವರ ಪ್ರಕಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಡಿಪ್ಲೋಮಾಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೇ 14 ಕೊನೆಯ ದಿನವಾಗಿದ್ದು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಾರ್ಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮೇ 15ರಂದು ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಮೇ 16ರಂದು ದಾಖಲೆ ಹಾಗೂ ಶುಲ್ಕದೊಂದಿಗೆ ಪ್ರವೇಶಾತಿ ಪಡೆಯಲು ಕೊನೆಯ ದಿನವಾಗಿದೆ ಎಂದು ಕಾಲೇಜಿನ ಪ್ರಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!