ಬ್ರೇಕಿಂಗ್ ನ್ಯೂಸ್
Search

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ

167

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮರುಘಾಮಠದ ಶಿವಮೂರ್ತಿ ಶಿವಾಚಾರ್ಯರ ಜೈಲು ಪಾಲಾಗಿದ್ದಾರೆ. ಹೀಗಾಗಿ ಸರ್ಕಾರ ಇದೀಗ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದವರನ್ನು ನೇಮಿಸಿದೆ ಆದೇಶಿಸಿದೆ.

ಈ ಬಗ್ಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಚಿತ್ರದುರ್ಗ ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹಲ್ಮಠದ ಪೀಠಾಧಿಪತಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶಿವಮೂರ್ತಿ ಶರಣರು 01-09-2022ರಿಂದ ಬಂಧನದಲ್ಲಿದ್ದಾರೆ. ಹೀಗಾಗಿ ಸಂಸ್ಥೆಯ ನಿತ್ಯದ ಚಟುವಟಿಕೆ ನಡೆಸಲು ಸಮಸ್ಯೆಯಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ, ಚರ, ಸ್ಥಿರ ಆಸ್ತಿಗಳ ಸಂರಕ್ಷಣೆಯ ಹಿನ್ನೆಲೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದವರನ್ನು ಟ್ರಸ್ಟ್ ಹಾಗೂ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯಾಗಿ ನೇಮಿಸಿದೆ ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!