ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಲಿಂಗೈಕ್ಯ

125

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಅರಭಾವಿಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಸೋಮವಾರ ಲಿಂಗೈಕ್ಯರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಅವರನ್ನು ಗೋಕಾಕಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಿಸದೆ ಸ್ವಾಮೀಜಿಗಳು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೃದಯಾಘಾತದಿಂದ ಶ್ರೀಗಳು ಲಿಂಗೈಕ್ಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ವಾಮೀಜಿಗಳ ನಿಧನದಿಂದ ಭಕ್ತವೃಂದ ಕಂಬನಿ ಮಿಡಿಯುತ್ತಿದೆ.




Leave a Reply

Your email address will not be published. Required fields are marked *

error: Content is protected !!