ಸೇನಾ ಹೆಲಿಕಾಪ್ಟರ್ ದುರಂತ: ಮೃತ ಪಟ್ಟವರೆಷ್ಟು?

605

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಪತ್ನಿ ಮಧುಲಿಕಾ ಸೇರಿದಂತೆ 14 ಅಧಿಕಾರಿಗಳು ಹೊರಟಿದ್ದ ಸೇನಾ ಹೆಲಿಕಾಪ್ಟರ್ ಸ್ಫೋಟಗೊಂಡ ಘಟನೆ ತಮಿಳುನಾಡಿನ ಕೂನೂರಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಮಾರು 11 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಯಾರು ಇದ್ದರು, ಯಾರು ಮೃತಪಟ್ಟಿದ್ದಾರೆ ಅನ್ನೋದು ತಿಳಿದು ಬಂದಿಲ್ಲ.

ಮೂವರನ್ನು ವೆಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅದರಲ್ಲಿ ಬಿಪಿನ್ ರಾವತ್ ಇದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಹಿರಿಯ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಈ ಕುರಿತು ಅಧಿಕೃತ ಮಾಹಿತಿ ನಾಳೆ ನೀಡಲಾಗುತ್ತೆ ಎಂದು ಸಚಿವರು ತಿಳಿಸಿದ್ದಾರೆ.

ಎಂಐ-17 ಹೆಲಿಕಾಪ್ಟರ್ ದುರಂತ ಸಂಭವಿಸಿದೆ. ಇದಕ್ಕೆ ನಿಜವಾದ ಕಾರಣ ಏನು ಅನ್ನೋದರ ತನಿಖೆ ಸರ್ಕಾರದಿಂದ ಹಾಗೂ ಹೆಲಿಕಾಪ್ಟರ್ ನಿರ್ಮಿಸಿದ ಸಂಸ್ಥೆಯಿಂದಲೂ ನಡೆಯುತ್ತೆ. ಆಗ ದುರಂತಕ್ಕೆ ನಿಜವಾದ ಕಾರಣ ತಿಳಿಯಲಿದೆ.




Leave a Reply

Your email address will not be published. Required fields are marked *

error: Content is protected !!