ರಾಜ್ಯಕ್ಕೆ 3ನೇ ಸ್ಥಾನ ಪಡೆದ ಸಿಂದಗಿ ವಿದ್ಯಾರ್ಥಿನಿ

552

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಕರ್ನಾಟಕ ದರ್ಶನ ವಿಷಯಾಧರಿತ ಚಿತ್ರಕಲಾ ಸ್ಪರ್ಧೆಯಲ್ಲಿ ತಾಲೂಕಿನ ಹಂದಿಗನೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ ಮಾಂತೇಶ ಉಪ್ಪಾರ ರಾಜ್ಯಕ್ಕೆ 3ನೇ ಸ್ಥಾನ ಪಡೆದಿದ್ದಾಳೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಜನವರಿ 18ರಂದು ನಡೆದ ಸರ್ಕಾರಿ ಹಾಗೂ ಅನುದಾನಿತ ಪ್ರೌಢ ಶಾಲಾ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಭಾಗ್ಯಶ್ರೀ ಉಪ್ಪಾರ 3ನೇ ಸ್ಥಾನ ಪಡೆದು ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾಳೆ. ಚಿತ್ರಕಲಾ ಶಿಕ್ಷಕ ಎಸ್.ಎಸ್ ಗೌಡರ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿ ಈ ಸಾಧನೆ ಮಾಡಿದ್ದು, ಶಾಲೆಯ ಶಿಕ್ಷಕರು, ಸಿಬ್ಬಂದಿ, ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಅಭಿನಂದಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!