ಸೋಲಿನ ಗ್ಯಾರೆಂಟಿಯಿಂದ ಡಿಕೆ ಸಹೋದರರಿಂದ ಗೂಂಡಾಗಿರಿ: ಆರ್.ಅಶೋಕ್

80

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆಯೆ ಶಾಶ್ವತವಾಗಿ ಸಿಎಂ ಇನ್ ವೇಟಿಂಗ್ ಆಗಿ ಉಳಿಯಬೇಕಾಗುತ್ತಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗರಿಗೆ ಇಳಿದಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸಿದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರರ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ ಎಂದು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!