ಏಷ್ಯಾ ಕಪ್ 2022: ಭಾನುವಾರ ಭಾರತ-ಪಾಕ್ ಹಣಾಹಣಿ

140

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಕ್ರಿಕೆಟ್ ಪ್ರೇಮಿಗಳು ಸಾಕಷ್ಟು ಕುತೂಹಲದಿಂದ ಕಾಯುತ್ತಿರುವ ಏಷ್ಯಾ ಕಪ್ 2022 ಟೂರ್ನಿಗ ತಂಡಗಳು ಸಜ್ಜಾಗಿವೆ. ಅದರಲ್ಲೂ ಭಾರತದ ಕ್ರಿಕೆಟ್ ಪ್ರೇಮಿಗಳು ತುದಿಗಾಲ ಮೇಲೆ ನಿಂತಿದ್ದು, ಭಾನುವಾರ ನಡೆಯುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಪಂದ್ಯ ನಡೆಯಲಿದೆ.

ದುಬೈನಲ್ಲಿ ಪಂದ್ಯಗಳು ನಡೆಯುತ್ತಿವೆ. ಈಗಾಗ್ಲೇ ಭಾನುವಾರದ ಪಂದ್ಯದ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. 2018ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಏಷ್ಯಾ ಕಪ್ ಟೂರ್ನಿ ಆಡಲಾಗಿತ್ತು. ಆಗ ಚಾಂಪಿಯನ್ ಆಗಿತ್ತು. ಈ ಬಾರಿಯೂ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಸಜ್ಜಾಗಿದೆ. ಸಂಜೆ 7.230ಕ್ಕೆ ಪಂದ್ಯ ನಡೆಯಲಿದೆ. ಎರಡು ತಂಡಗಳ 11 ಆಟಗಾರರ ತಂಡ ಹೀಗಿದೆ.

ಟೀಂ ಇಂಡಿಯಾ:

ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್.ಅಶ್ವಿನ್, ಭುವನೇಶ್ವರ್ ಕುಮಾರ್, ಯುಜವೇಂದ್ರ ಚಾಹಲ್, ಅರ್ಷದೀಪ್ ಸಿಂಗ್ ತಂಡದಲ್ಲಿದ್ದಾರೆ.

ಪಾಕಿಸ್ತಾನ:

ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್,  ಫಖರ್ ಜಮಾನ್, ಆಸಿಫ್ ಅಲಿ, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ರಿಜ್ವಾನ್, ಶಹನವಾಜ್ ಧಹಾನಿ,  ಉಸ್ಮಾನ್ ಖಾದಿರ್, ಮೊಹಮ್ಮದ್ ವಾಸಿಮ್ ಜೂನಿಯರ್,  ಹ್ಯಾರಿಸ್ ರೌಫ್ ಟೀಂನಲ್ಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!