ನಾಳೆಯಿಂದ ಏಷ್ಯ ಕಪ್ ಹಣಾಹಣಿ

342

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಕ್ರಿಕೆಟ್ ಪ್ರೇಮಿಗಳು ಎದುರು ನೋಡುತ್ತಿರುವ ಏಷ್ಯ ಕಪ್ -2023 ಟೂರ್ನಿ ಆಗಸ್ಟ್ 30ರಿಂದ ಶುರುವಾಗಲಿದೆ. 2 ಗುಂಪು 13 ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೇಪಾಳ ಎದುರಾಗಲಿವೆ.

ಭಾರತ ತಂಡ ಸೆಪ್ಟೆಂಬರ್ 2ರಂದು ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಕಣಕ್ಕೆ ಇಳಿಯಲಿದೆ. ಸೆ.4ರಂದು ನೇಪಾಳ ವಿರುದ್ಧ ಆಡಲಿದೆ. ಎಲ್ಲ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 3ಗಂಟೆಗೆ ನಡೆಯಲಿವೆ. ಶ್ರೀಲಂಕಾ ಹಾಗೂ ಪಾಕಿಸ್ತಾನದಲ್ಲಿ ಪಂದ್ಯಗಳು ನಡೆಯಲಿವೆ. ಸೆಪ್ಟೆಂಬರ್ 17ರಂದು ಫೈನಲ್ ಪಂದ್ಯ ನಡೆಯಲಿದೆ.

ಟೀಂ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಶುಭನಂ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ಉಪ ನಾಯಕ), ರವೀಂದ್ರ ಜಡೇಜಾ, ಶ್ರಾದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶೆಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ 16 ಜನರ ತಂಡದಲ್ಲಿದ್ದಾರೆ. ಸಂಜು ಸ್ಯಾಮ್ಸನ್ ಕಾಯ್ದಿರಿಸಿದ ಆಟಗಾರರಾಗಿದ್ದಾರೆ.

ತಂಡಗಳು ಹೀಗಿವೆ:

ಗ್ರೂಪ್ ಎ- ಭಾರತ, ಪಾಕಿಸ್ತಾನ, ನೇಪಾಳ ಹಾಗೂ ಗ್ರೂಪ್ ಬಿ- ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ




Leave a Reply

Your email address will not be published. Required fields are marked *

error: Content is protected !!