ಲಂಕಾ ವಿರುದ್ಧ ಗೆದ್ದು ಚಿನ್ನಕ್ಕೆ ಕೊರಳೊಡ್ಡಿದ ಭಾರತೀಯ ನಾರಿಯರು

244

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ಟೀಂ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದೆ. ಈ ಮೂಲಕ ಚಿನ್ನದ ಪದಕವನ್ನು ಕೊರಳಿಗೆ ಹಾಕಿಕೊಂಡಿದೆ.

ಪಿಂಗ್ ಫೈಂಗ್ ಕ್ಯಾಂಪಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಕದನದಲ್ಲಿ ಮೊದಲು ಬ್ಯಾಟ್ ಮಾಡಿದ ಹರ್ಮನ್ ಪ್ರೀತ್ ಕೌರ್ ಪಡೆ, 7 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿತು. ಸ್ಮೃತಿ ಮಂದಾನ 46, ಜೆಮಿಯಾ ರಾಡ್ರಿಗಸ್ 42 ರನ್ ಗಳಿಸಿದರು.

ಗುರಿ ಬೆನ್ನು ಹತ್ತಿದ್ದ ಲಂಕಾ ಪಡೆ ಭಾರತೀಯ ಬೌಲರ್ ಗಳ ಎದುರು ಆಡಲು ಆಗದೆ 97 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡು ಪರಾಭವಗೊಂಡಿತು. ಟೈಟಾಸ್ ಸಾಧು 3, ರಾಜೇಶ್ವರಿ ಗಾಯಕ್ವಾಡ್ 2, ದೀಪ್ತಿ ಶರ್ಮಾ, ದೇವಿಕಾ ವೈದ್, ಪೂಜಾ ವಸ್ತ್ರಾಕರ್ ತಲಾ 1 ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಮೊದಲ ಬಾರಿಗೆ ಚಿನ್ನ ಜಯಸಿತು. ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯ ಕಪ್ ಟೂರ್ನಿಯಲ್ಲಿ ಪುರುಷರ ತಂಡ ಲಂಕಾ ವಿರುದ್ಧ ಜಯಿಸಿತು. ಈಗ ಮಹಿಳಾ ಪಡೆ ಜಯ ಸಾಧಿಸಿದೆ.




Leave a Reply

Your email address will not be published. Required fields are marked *

error: Content is protected !!