ಸಿಂದಗಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ: 2 ಲಕ್ಷ ದೋಚಿದ ಖದೀಮರು

1016

ಸಿಂದಗಿ: ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು 2 ಲಕ್ಷ ರೂಪಾಯಿ ದೋಚಿಕೊಂಡು ಪರಾರಿಯಾದ ಘಟನೆ ಸಿಂದಗಿಯಲ್ಲಿಂದು ನಡೆದಿದೆ.

ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಕಾಳಿಕಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ವೀರಭದ್ರ ಕುಂಬಾರ ಎಂಬುವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು 2 ಲಕ್ಷ ರೂಪಾಯಿ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.

ಧರ್ಮಸ್ಥಳ ಮಂಜುನಾಥೇಶ್ವರ ಗ್ರಾಮ ಸೇವಾ ಕೇಂದ್ರದಿಂದ ಹಣ ಪಡೆದು ಹೋಗುವಾಗ, ಮೂವರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಈ ಬಗ್ಗೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!