ನಾಳೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ?

163

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳ ತಯಾರಿ ಭರ್ಜರಿಯಾಗಿದೆ. ಎಲ್ಲ ರಾಜಕೀಯ ಪಕ್ಷಗಳು ಭಾರೀ ಪ್ರಚಾರ ನಡೆಸಿವೆ. ಜೆಡಿಎಸ್ ಈಗಾಗ್ಲೇ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈಗ ಕಾಂಗ್ರೆಸ್ ಸರದಿ. ಮಾರ್ಚ್ 17ಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗುತ್ತೆ ಎಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಸಭೆಯ ನಂತರ 150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಈಗಾಗ್ಲೇ ಟಿಕೆಟ್ ಆಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಅನೇಕ ಕ್ಷೇತ್ರಗಳಲ್ಲಿ ಮೂರ್ನಾಲ್ಕು ಮುಖಂಡರು ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದು, ಯಾರಿಗೆ ಸಿಗುತ್ತೆ ಅನ್ನೋ ಟೆನ್ಷನ್ ಇದೆ. ಹೀಗಾಗಿ ಕ್ಷೇತ್ರದಲ್ಲಿ ಸರಿಯಾಗಿ ಪ್ರಚಾರ ನಡೆಸಲು ಆಗುತ್ತಿಲ್ಲ. ಟಿಕೆಟ್ ಘೋಷಣೆಯಾದರೆ ಅಭ್ಯರ್ಥಿಗಳು ಮತ ಪ್ರಚಾರ ನಡೆಸಬಹುದು. ಹೀಗಾಗಿ ಮೊದಲ ಪಟ್ಟಿ ಮಾರ್ಚ್ 17ರಂದು ಬಿಡುಗಡೆ ಎನ್ನಲಾಗುತ್ತಿದ್ದು, ಸಭೆಯ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ.




Leave a Reply

Your email address will not be published. Required fields are marked *

error: Content is protected !!