ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ

373

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಅಧಿವೇಶನ ಆರಂಭದ ಹಿನ್ನೆಲೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

ಫೆಬ್ರವರಿ 14ರಿಂದ 25ರವರೆಗೆ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ 2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಧಿವೇಶನದ ವೇಳೆ ಪ್ರತಿಭಟನೆ, ವಿಧಾನಸೌಧ ಮುತ್ತಿಗೆಗೆ ಅವಕಾಶವಿಲ್ಲ. ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ಗಂಟೆಯ ತನಕ ನಿಷೇಧಾಜ್ಞೆ ಇರುತ್ತೆ.




Leave a Reply

Your email address will not be published. Required fields are marked *

error: Content is protected !!