ಭೀಮ್ ಆರ್ಮಿ ಮುಖ್ಯಸ್ಥನ ಮೇಲೆ ಗುಂಡಿನ ದಾಳಿ

244

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಉತ್ತರ ಪ್ರದೇಶದ ಸಹರಾನ್ಪುರ್ ಜಿಲ್ಲೆಯ ದೇವಬಂದ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.

ಕಾರಿನಲ್ಲಿ ಬಂದ ಕೆಲವರು ಮೊದಲು ಆಜಾದ್ ಅವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಇವರ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಆಜಾದ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ಭೀಮ್ ಆರ್ಮಿ ಆಗ್ರಹಿಸಿದೆ.




Leave a Reply

Your email address will not be published. Required fields are marked *

error: Content is protected !!