ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳರಾಟ

251

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಐದು ಜನ ಕಳ್ಳರು ಮನೆಗಳ್ಳತನಕ್ಕೆ ಪ್ರಯತ್ನಿಸಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಐವರು ಕಳ್ಳರ ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳ್ಳರು ಕೈಯಲ್ಲಿ ಗೋಣಿ ಚೀಲ, ರಾಡ್ ಹಾಗೂ ಮಾರಕಾಸ್ತ್ರ ಹಿಡಿದುಕೊಂಡು ಓಡಾಡಿರುವ ದೃಶ್ಯ ಸೆರೆಯಾಗಿದೆ. ಎರಡು ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಆದರೆ, ಅವರಿಗೆ ಏನೂ ಸಿಗದೆ ವಾಪಸ್ ಹೋಗಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!