ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನ, ಮಹಿಳೆಯ ಮೇಲೆ ಹಲ್ಲೆ

146

ಪ್ರಜಾಸ್ತ್ರ ಅಪರಾಧ ಸುದ್ದಿ

ಧಾರವಾಡ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಮಂಗಳವಾರ ನಸುಕಿನಜಾವ ಮಹಿಳೆ ಮೇಲೆ ಹಲ್ಲೆ ಮಾಡಿ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನ ನಡೆದಿದೆ. ಈ ವೇಳೆ ರೇಣುಕಾ ದೋಡ್ಲಿ(27) ಎಂಬುವರ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ.

ರೇಣುಕಾ ಹಾಗೂ ಗೀತಾ ಎಂಬುವರು ಎಂದಿನಂತೆ ನಸುಕಿನಜಾವ ವಾಯುವಿಹಾರಕ್ಕೆ ತೆರಳಿದ್ದಾಗ ಇಬ್ಬರು ಕಳ್ಳರು ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರ ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ. ಆಗ ಅವರೊಂದಿಗೆ ಹೋರಾಡುವಾಗ ಕಳ್ಳರು ಚಾಕುವಿನಿಂದ ಕುತ್ತಿಗೆ, ಕೈಗೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಿಎಸ್ಐ ಭೇಟಿ ನೀಡಿದರು. ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!