ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳ್ಳರು ಕದ್ದ ಬಂಗಾರವನ್ನು ಖರೀದಿಸುತ್ತಿದ್ದರು ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನನ್ನು ಆಂಧ್ರಾ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಹೈಗ್ರೌಂಡ್ಸ್ ಠಾಣೆ ವ್ಯಾಪ್ತಿಯಲ್ಲಿರುವ ಬಾಬು ನಿವಾಸದ ಮೇಲೆ ಸಿಸಿಬಿ ಪೊಲೀಸರ ಸಹಾಯದೊಂದಿಗೆ ದಾಳಿ ನಡೆಸಿದ ಆಂಧ್ರಾ ಪೊಲೀಸರು, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ.