ನಾಳೆ ನೂತನ ಸಚಿವರ ಪದಗ್ರಹಣ: ಮೊದಲ ಸುತ್ತಿನಲ್ಲಿ ಎಷ್ಟು ಜನ ಗೊತ್ತಾ?

242

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ ಸಚಿವ ಸಂಪುಟ ಕಸರತ್ತು ಕೊನೆಯ ಹಂತ ತಲುಪಿದೆ. ಸಿಎಂ ಬಸವರಾಜ ಬೊಮ್ಮಾಯಿ ನೂತನ ಸಚಿವರ ಲಿಸ್ಟ್ ತೆಗೆದುಕೊಂಡು ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ನಾಳೆ 5ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.

ನಾಳೆ ಸಂಜೆ 5 ಗಂಟೆಗೆ ರಾಜ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಮೊದಲ ಹಂತದಲ್ಲಿ 26 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಉಳಿದ 10 ಸ್ಥಾನಗಳಿಗೆ ಸಚಿವರ ನೇಮಕವಾಗಲಿದೆ.

ನೂತನ ಸಚಿವ ಸಂಪುಟದಲ್ಲಿ ಕೆಲ ಹಿರಿಯ ನಾಯಕರಿಗೆ ಗೇಟ್ ಪಾಸ್ ನೀಡಲಾಗಿದೆ. ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸರ್ಕಾರ ರಚನೆಗೆ ಸಾಥ್ ನೀಡಿದ ಮುಂಬೈ ಟೀಂ ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!