ಡಿ.26ರಿಂದ ಬಾಕ್ಸಿಂಗ್ ಡೇ ಪಂದ್ಯ: ಕೆ.ಎಲ್ ರಾಹುಲಗೆ ಸಿಗ್ಲಿಲ್ಲ ಚಾನ್ಸ್

232

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಆಸ್ಟ್ರೇಲಿಯಾ ಹಾಗೂ ಇಂಡಿಯಾ ನಡುವೆ 2ನೇ ಟೆಸ್ಟ್ ಪಂದ್ಯ ಶನಿವಾರ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ವಿರಾಟ ಕೊಹ್ಲಿ ಬಳಗಕ್ಕೆ ಬಾಕ್ಸಿಂಗ್ ಡೇ ಮ್ಯಾಚ್ ತುಂಬಾ ಮುಖ್ಯವಾಗಿದೆ. ಹೀಗಾಗಿ ಶನಿವಾರದಿಂದ ಶುರುವಾಗುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೇಗೆ ಆಡುತ್ತೆ ಅನ್ನೋ ಕುತೂಹಲವಿದೆ.

ಮೆಲ್ಬರ್ನ್ ಅಂಗಳದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶುಭ್ಮನ್ ಗಿಲ್ ಹಾಗೂ ಮೊಹಮ್ಮದ ಸಿರಾಜ್ ಟೆಸ್ಟ್ ಕ್ರಿಕೆಟ್ ದುನಿಯಾಗೆ ಪಾದಾರ್ಪಣೆ ಮಾಡ್ತಿದ್ದಾರೆ. ಈ ಮೂಲಕ ಈ ಇಬ್ಬರು ಆಟಗಾರರು ಆಸೀಸ್ ವಿರುದ್ಧ ಆಡುವ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯಕ್ಕೆ ಎಂಟ್ರಿ ಪಡೆಯುತ್ತಿದ್ದಾರೆ.

ಇನ್ನು ಈಗಾಗ್ಲೇ ಒಳ್ಳೆಯ ಲಯದಲ್ಲಿರುವ ಕನ್ನಡಿಗ ಕೆ.ಎಲ್ ರಾಹುಲಗೆ 2ನೇ ಟೆಸ್ಟ್ ಪಂದ್ಯದಲ್ಲಿಯೂ ಸ್ಥಾನ ನೀಡಿಲ್ಲ. ಹೀಗಾಗಿ ಮತ್ತೆ ಬೆಂಚ್ ಕಾಯಬೇಕಾಗಿದೆ. ಇನ್ನು ಕ್ಯಾಪ್ಟನ್ ಕೊಹ್ಲಿ ಪತ್ನಿ, ನಟಿ ಅನುಷ್ಕಾ ಶರ್ಮಾ ಗರ್ಭಿಣಿಯಾಗಿದ್ದು ಹೆರಿಗೆ ಸಮಯವಾಗಿದೆ. ಹೀಗಾಗಿ ಕೊಹ್ಲಿ ಮುಂದಿನ ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅಜಿಂಕ್ಯ ರಹಾನೆ ಟೀಂ ಲೀಡ್ ಮಾಡಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!