ಆಟೋ-ಟಿಪ್ಪರ್ ಅಪಘಾತ: ಒಂದೇ ಕುಟುಂಬದ ಐವರ ಸಾವು

188

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಆಟೋ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದುರಂತ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಹತ್ತಿರ ನಡೆದಿದೆ. ದಡದಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸೇರಿ ಐವರು ಮೃತಪಟ್ಟಿದ್ದಾರೆ.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮುತ್ತಮ್ಮ, ವೆಂಕಟೇಶ, ಬಸಮ್ಮಣ್ಣಿ, ಚಾಮುಂಡೇಶ್ವರಿ ಹಾಗೂ ಒಂದು ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿರುವ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ. ಮದ್ದೂರು ಕಡೆಯಿಂದ ಬರುತ್ತಿದ್ದ ಆಟೋ ಹಾಗೂ ಮಳವಳ್ಳಿ ಕಡೆಯಿಂದ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!