ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರೋನಾ ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ರಾಜ್ಯ ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ನಲ್ಲಿ ಆಟೋ, ಟ್ಯಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಇದ್ದಾರೆ. ಸರ್ಕಾರ ಘೋಷಿಸಿರುವ 3 ಸಾವಿರ ರೂಪಾಯಿ ಪರಿಹಾರಕ್ಕೆ ಇಂದಿನಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಸಿಂಧು ವೆಬ್ ಪೋರ್ಟಲ್ ನಲ್ಲಿ ಮೇ 27, ಗುರುವಾರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದವರಿಗೆ ಅವರ ಬ್ಯಾಂಕ್ ಅಕೌಂಟ್ ಗೆ ನೇರವಾಗಿ ಪರಿಹಾರದ ಹಣ ವರ್ಗಾಹಿಸಲಾಗುವುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷಿತೆ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.