ಅಯೋಧ್ಯೆ ಮಸೀದಿಗೆ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಹೋರಾಟಗಾರನ ಹೆಸರು

219

ಪ್ರಜಾಸ್ತ್ರ ಸುದ್ದಿ

ಅಯೋಧೆ: ಅಯೋಧ್ಯೆಯಲ್ಲಿ 5 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಗೆ, ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಹೋರಾಟದಲ್ಲಿ ಭಾಗವಹಿಸಿದ ಕ್ರಾಂತಿಕಾರಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮೌಲ್ವಿ ಅಹ್ಮದುಲ್ಲಾ ಷಾ ಫೈಜಾಬಾದಿ ಹೆಸರು ಇಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ ಕಾರ್ಯದರ್ಶಿ ಅಥರ್ ಹುಸೇನ್ ತಿಳಿಸಿದ್ದಾರೆ. 5 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗ್ತಿರುವ ಮಸೀದಿ, ಆಸ್ಪತ್ರೆ, ಸಂಶೋಧನಾ ಕೇಂದ್ರ, ವಸ್ತುಸಂಗ್ರಹಾಲಯ, ಸಮುದಾಯ ಅಡುಗೆ ಮನೆ ಸೇರಿದಂತೆ ಇಡೀ ಯೋಜನೆಗೆ ಮೌಲ್ವಿ ಅಹ್ಮದುಲ್ಲಾ ಷಾ ಫೈಜಾಬಾದಿ ಹೆಸರು ಇಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ್ರು. ಕಾನ್ಪುರದ ನಾನಾ ಸಾಹೇಬ್, ಅರಹಾದ ಕುನ್ವರ್ ಸಿಂಗ್ ಸೇರಿದಂತೆ ಹಲವರ ಜೊತೆ ಸೇರಿ ಹೋರಾಟ ನಡೆಸಿದ್ರು. ಅಲ್ದೇ, ಭಾರತದಲ್ಲಿ ಹಿಂದೂ-ಮುಸ್ಲಿಂ ಸಾಮರಸ್ಯ ಸಲುವಾಗಿಯೂ ಕೆಲಸ ಮಾಡಿದ್ದು, 160 ವರ್ಷಗಳ ಹಿಂದೆ ಬ್ರಿಟಿಷರು ಅವರ ರುಂಡ ಮುಂಡ ಬೇರೆ ಬೇರೆ ಮಾಡಿ ಬೇರೆ ಬೇರೆ ಸ್ಥಳಗಳಲ್ಲಿ ಹೂತಿದ್ರು ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!