ಅಯೋಧ್ಯೆಯಲ್ಲಿ ದಕ್ಷಿಣ ಭಾರತ ಭಾಷೆಗಳ ನಾಮಫಲಕ

218

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರ ಇಂದು ಉದ್ಘಾಟನೆಯಾಗುತ್ತಿದೆ. ಪ್ರಧಾನ ಮಂತ್ರಿ ಸೇರಿದಂತೆ ಸಾವಿರು ಸಂಖ್ಯೆಯ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಉದ್ಘಾಟನೆ ಬಳಿಕ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ.

ರಾಮ ಮಂದಿರ ವೀಕ್ಷಣೆಗೆ ದೇಶ, ವಿದೇಶಗಳಿಂದ ಭಕ್ತರು ಆಗಮಿಸಲಿದ್ದಾರೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ದಕ್ಷಿಣ ಭಾರತದ ಭಾಷೆಗಳಾದ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿಯೂ ನಾಮಫಲಕ ಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇವಸ್ಥಾನಕ್ಕೆ ತೆರಳುವ ಮಾರ್ಗ ಸೂಚಿಸುವ ಫಲಕಗಳು, ವಾಹನಗಳ ನಿಲುಗಡೆ, ಸಂಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಭಕ್ತರು ಹೋಗುವ ಮಾರ್ಗದಲ್ಲಿ ವಾಹನಗಳಿಗೆ ನಿರ್ಬಂಧ ಇರುತ್ತೆ ಎಂದು ಪೊಲೀಸ್ ಮಹಾನಿರ್ದೇಶಕರಾದ ಪಿಯೂಷ್ ಮೊರ್ಡಿಯಾ ಹೇಳಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!