ಪ್ರಜಾಸ್ತ್ರ ಸಿನಿಮಾ ಡೆಸ್ಕ್
ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ಬಘೀರ ಚಿತ್ರ ಸಾಕಷ್ಟು ಕುತೂಹಲ ಮೂಡಿಸಿದೆ. ಡಾ.ಸೂರಿ ನಿರ್ದೇಶನದ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದರೆ, ಸಿನಿಮಾ ತಡವಾಗುತ್ತಾ ಬಂದಿದೆ. ಈಗ ಶ್ರೀಮುರುಳಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ.
ಡಿಸೆಂಬರ್ 17ರ ಮುಂಜಾನೆ 9.45ಕ್ಕೆ ಟೀಸರ್ ರಿಲೀಸ್ ಮಾಡಲಾಗುತ್ತಿದೆ. ಈ ಬಗ್ಗೆ ಚಿತ್ರ ತಂಡ ತಿಳಿಸಿದೆ. ಶ್ರೀಮುರುಳಿಗೆ ಜೋಡಿಯಾಗಿ ನಟಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ.