ಇಡೀ ಅರಣ್ಯ ದತ್ತು ಪಡೆದ ‘ಬಾಹುಬಲಿ’

372

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಟಾಲಿವುಡ್ ಯಂಗ್ ರೆಬಲ್ ಸ್ಟಾರ್ ಪ್ರಭಾಸ ಇಡೀ ಕಾಡನ್ನ ದತ್ತು ಪಡೆದಿದ್ದಾರೆ. ಈ ಮೂಲಕ ಇತರೆ ನಟ, ನಟಿಯರಿಗೆ ಮಾದರಿಯಾಗುವ ಕೆಲಸ ಮಾಡಿದ್ದಾರೆ. ಹೈದ್ರಾಬಾದ್ ಬಳಿಯ ಬರೋಬ್ಬರಿ 1,650 ಎಕರೆ ಹೊಂದಿರುವ ಕಾಜಿಪಲ್ಲಿ ಮೀಸಲು ಅರಣ್ಯವನ್ನ ದತ್ತು ಪಡೆದು, ಅಭಿವೃದ್ಧಿಗೆ ಮುಂದಾಗಿದ್ದಾರೆ.

ಮೀಸಲು ಅರಣ್ಯ ಅಭಿವೃದ್ಧಿಗಾಗಿ ಅಧಿಕಾರಿಗಳಿಗೆ 2 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಮ್ಗೆ ಅವಕಾಶ ನೀಡಿದ ರಾಜ್ಯಸಭಾ ಸದಸ್ಯ ಸಂತೋಷಕುಮಾರ, ತೆಲಂಗಾಣ ಸರ್ಕಾರ ಹಾಗೂ ಅರಣ್ಯ ಅಧಿಕಾರಿಗಳಿಗೆ ಧನ್ಯವಾದಗಳನ್ನ ಸಲ್ಲಿಸಿದ್ದಾರೆ.

ಗ್ರೀನ್ ಇಂಡಿಯಾ ಚಾಲೆಂಜ್ ಮೂಲಕ ಜನರಲ್ಲಿಯೂ ಪರಿಸರ ಕಾಳಜಿ ಬಗ್ಗೆ ಮನವಿ ಮಾಡಿದ್ದಾರೆ. ನಟ ಪ್ರಭಾಸ ಕಾರ್ಯಕ್ಕೆ ಎಲ್ಲಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.




Leave a Reply

Your email address will not be published. Required fields are marked *

error: Content is protected !!