ರಾಜ್ಯದಲ್ಲಿ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಿಗೆ ನಿರ್ಬಂಧ!

137

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇತ್ತೀಚೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಯೊಬ್ಬರು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಗಲಾಟೆ ನಡೆದು, ಇಬ್ಬರು ಯುವಕರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ 2023ರ ಚುನಾವಣೆ ಮುಗಿಯುವ ತನಕ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಿಗಳನ್ನು ನಡೆಸದಂತೆ ನಿರ್ಬಂಧಿಸಲಾಗಿದೆ.

ಈ ಕುರಿತು ರಾಜ್ಯ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಒಂದು ವೇಳೆ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಿದರೆ ಅಂತವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಡಿವೈಎಸ್ಪಿ, ಸಿಪಿಐ, ಪಿಐ, ಪಿಎಸ್ಐ ಅವರಿಗೆ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.




Leave a Reply

Your email address will not be published. Required fields are marked *

error: Content is protected !!