ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಜಯತೀರ್ಥ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಬನಾರಸ್ ಚಿತ್ರದ ಮೊದಲ ವಿಡಿಯೋ ಸಾಂಗ್ ಜೂನ್ 27ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಈ ಬಗ್ಗೆ ಸ್ವತಃ ನಿರ್ದೇಶಕರು ತಿಳಿಸಿದ್ದು, ಮಾಯ ಗಂಗೆ ಅನ್ನೋ ವಿಡಿಯೋ ಸಾಂಗ್ ಬಿಡುಗಡೆ ಮಾಡಲು ಚಿತ್ರತಂಡ ರೆಡಿಯಾಗಿದೆ.
ಝೈದ್ ಖಾನ್ ಹಾಗೂ ಸೊನಲ್ ಮೊಂಥೆರೊ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಎನ್.ಕೆ ಪ್ರೊಡಕ್ಷನ್ ಬ್ಯಾನರ್ ನಲ್ಲಿ ವೈ.ಬಿ ರೆಡ್ಡಿ ಚಿತ್ರಕ್ಕೆ ಬಂಡಾವಳ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಬೆಂಗಳೂರು ಹಾಗೂ ಕಾಶಿಯಲ್ಲಿ ಬಹುತೇಕ ಚಿತ್ರೀಕರಣ ಮಾಡಲಾಗಿದೆ.