ಸೇನಾ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ

112

ಪ್ರಜಾಸ್ತ್ರ ಸುದ್ದಿ

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್, ಬಾರಾಮುಲ್ಲಾದಲ್ಲಿ ನಡೆದ ಸೇನಾ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಉರಿ ಹಾಗೂ ಹತ್ಲಂಗದಲ್ಲಿ ಸೇನೆ ಹಾಗೂ ಬಾರಾಮುಲ್ಲಾ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ.

ಶನಿವಾರವೂ ಕಾರ್ಯಾಚರಣೆ ಮುಂದುವರೆದಿದೆ. ಇಬ್ಬರು ಸೇನಾಧಿಕಾರಿಗಳು, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಕಾಶ್ಮೀರ್ ಪೊಲೀಸ್ ವಲಯ ತಿಳಿಸಿದೆ. ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಭದ್ರತಾ ಪಡೆ ಸೈನಿಕರು ಹುತಾತ್ಮರಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!