ಬಸವಣ್ಣ ಸಾಂಸ್ಕೃತಿಕ ನಾಯಕ: ಸಿಂದಗಿಯಲ್ಲಿ ಸಂಭ್ರಮಾಚರಣೆ

159

ಪ್ರಜಾಸ್ತ್ರ ಸುದ್ದಿ

ಸಿಂದಗಿ: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಗುರುವಾರ ಮಹತ್ವದ ಘೋಷಣೆಯನ್ನು ಸರ್ಕಾರ ಪ್ರಕಟಿಸಿದೆ. ಇದಕ್ಕೆ ಹರ್ಷವ್ಯಕ್ತಪಡಿಸಿ ಸಿಂದಗಿಯಲ್ಲಿ ಶುಕ್ರವಾರ ಪಟಾಕಿ ಸಿಡಿಸಲಾಯಿತು.

ರಾಷ್ಟ್ರೀಯ ಬಸವದಳ ಸಿಂದಗಿ, ವಿವಿಧ ಸಂಘಟನೆಗಳ ಮುಖಂಡರು, ಸಾಹಿತಿಗಳು, ಕಾಲೇಜು ವಿದ್ಯಾರ್ಥಿಗಳ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಸಂಭ್ರಮಾಚರಣೆ ನಡೆಸಲಾಯಿತು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ವೈ.ಸಿ ಮಯೂರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಪ್ರಾಧ್ಯಾಪಕ ಅರವಿಂದ ಮನಗೂಳಿ ಮಾತನಾಡಿ, ರಾಜ್ಯ ಕಾಂಗ್ರೆಸ್ ತೆಗೆದುಕೊಂಡು ನಿರ್ಧಾರ ಉತ್ತಮವಾಗಿದೆ. ಸಮ ಸಮಾಜದ ಕಲ್ಪನೆಯನ್ನು ನೀಡಿ, ಅದಕ್ಕಾಗಿ ಕ್ರಾಂತಿಯನ್ನೇ ನಡೆಸಿದವರು ಬಸವಣ್ಣನವರು. ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ತುಂಬಾ ಸಂತೋಷದ ಸಂಗತಿ ಅಂತಾ ಹೇಳಿದರು.

ಇದೇ ಸಂದರ್ಭದಲ್ಲಿ ಹಿಕ್ಕನಗುತ್ತಿಯ ಲಿಂಗಾಯತ ಸಮುದಾಯದ ಮಠದ ಪ್ರಭುಲಿಂಗ ಸ್ವಾಮೀಜಿಗಳು, ಹಿರಿಯ ಜಾನಪದ ವಿದ್ವಾಂಸ ಡಾ.ಎಂ.ಎಂ ಪಡಶೆಟ್ಟಿ, ರಾಷ್ಟ್ರೀಯ ಬಸವದಳದ ಅಧ್ಯಕ್ಷ ಮಲ್ಲು ಅರ್ಜುಣಗಿ, ಗುರು ತಾರಾಪುರ, ಸಿದ್ದಬಸು ಕುಂಬಾರ, ಶಿವಾನಂದ ಕಲಬುರಗಿ, ಗುರು ಬಸರಕೋಡ, ಶಿವಕುಮಾರ ಶಿಂಪಗೇರ, ಜಗದೀಶ ಕಲಬುರಗಿ, ಸಿದ್ದರಾಮ ಪಟ್ಟಣಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!