ಬೌದ್ಧ ಧರ್ಮದ ವಿರುದ್ಧ ಹೇಳಿಕೆ: ಸಚಿವ ಸುಧಾಕರ್ ರಾಜೀನಾಮೆಗೆ ಒತ್ತಾಯ

179

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಬೌದ್ಧ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಸರ್ಕಾರ ಕ್ರಮಕ್ಕೆ ಮುಂದಾಗಬೇಕು ಎಂದು ಬೌದ್ಧ ಧರ್ಮದ ಮುಖಂಡ ಮಹೇಶ ಆಗ್ರಹಿಸಿದ್ದಾರೆ. ನಗರದಲ್ಲಿ ಸುಮಾರು 25 ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ರಾಜಕಾರಣಿಗಳು ರಾಜಕೀಯ ಮಾಡಬಾರದು. ಬೌದ್ಧ ಧರ್ಮದ ವಿರುದ್ಧ ಮಾತನಾಡಿರುವ ಸಚಿವ ಸುಧಾಕರದಿಂದ ಸರ್ಕಾರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ.ಕೆ ಸುಧಾಕರ್, ಬೌದ್ಧ ಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರ ಹೆಗ್ಗಳಿಕೆಯಾಗಿದೆ ಎಂದು ಹೇಳಿದ್ದಾರೆ. ಈ ವಿವಾದಾತ್ಮಕ ಹೇಳಿಕೆಯಿಂದ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.




Leave a Reply

Your email address will not be published. Required fields are marked *

error: Content is protected !!