ಒಂದೇ ಏಟಿಗೆ ಎರಡು ಹಕ್ಕಿ ಹೊಡೆದ ಲಕ್ಷ್ಮೀ ಹೆಬ್ಬಾಳ್ಕರ್

364

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೂಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಂದೇ ಏಟಿಗೆ ಎರಡು ಹಕ್ಕಿಗಳನ್ನು ಹೊಡೆದಿದ್ದಾರೆ.

ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಒಬ್ಬ ಸಹೋದರ ಕಾಂಗ್ರೆಸ್, ಇನ್ನೊಬ್ಬ ಸಹೋದರ ಬಿಜೆಪಿಯಲ್ಲಿದ್ದಾರೆ. ಹೀಗಾಗಿ ತೀವ್ರ ಕುತೂಹಲ ಮೂಡಿಸಿತ್ತು. ಇದರ ಜೊತೆಗೆ ತನ್ನ ತಮ್ಮನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ರಮೇಶ ಜಾರಕಿಹೊಳಿ ವಿರುದ್ಧದ ಹೋರಾಟದಲ್ಲೂ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೂಳಿ ಗೆಲುವು ಬಿಜೆಪಿ ಹಾಗೂ ರಮೇಶ್ ಜಾರಕಿಹೊಳಿ ಪಡೆಗೆ ದೊಡ್ಡ ಪೆಟ್ಟು ಕೊಟ್ಟಿದೆ. ಲಖನ್ ಜಾರಕಿಹೊಳಿ 2ನೇ ಸ್ಥಾನ, ಬಿಜೆಪಿಯ ಮಹಾಂತೇಶ್ ಕವಠಗಿಮಠ ಸೋಲು ಅನುಭವಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!