ಪಾರ್ಥ, ಅರ್ಪಿತಾ ನ್ಯಾಯಾಂಗ ಬಂಧನ

311

ಪ್ರಜಾಸ್ತ್ರ ಸುದ್ದಿ

ಕೊಲ್ಕತ್ತಾ: ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಪಶ್ಚಿಮ ಬಂಗಾಳ ಮಾಜಿ ಸಿಎಂ ಪಾರ್ಥ ಚಟರ್ಜಿ ಹಾಗೂ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಎರಡು ದಿನಗಳ ಸಿಐಡಿ ಕಸ್ಟಡಿ ಕೊನೆಯಾದ ಹಿನ್ನಲೆಯಲ್ಲಿ ಇಂದು ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಕೊಲ್ಕತ್ತಾ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಇದುವರೆಗೂ 50 ಕೋಟಿ ರೂಪಾಯಿ ಹಾಗೂ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.




Leave a Reply

Your email address will not be published. Required fields are marked *

error: Content is protected !!