ನಿಂತಿದ್ದ ಕ್ಯಾಂಟರ್ ಗೆ ಬೈಕ್ ಡಿಕ್ಕಿ: ಯುವಕ, ಯುವತಿ ಸಾವು

116

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೆಟ್ಟು ನಿಂತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಬಂದು ಬುಲೆಟ್ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಆವತಿ ಹತ್ತಿರ ನಡೆದಿದೆ.

ಬುಲೆಟ್ ಬೈಕ್ ನಲ್ಲಿ ಚಿಕ್ಕಬಳ್ಳಾಪುರದಿಂದ ಭರತ್ ಅನ್ನೋ ಯುವಕ ಹಾಗೂ ಯುವತಿಯೊಬ್ಬಳು ಬರುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಟ್ಯಾಂಕರ್ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ಯುವತಿಯ ಕುರಿತು ಮಾಹಿತಿ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!