ನಾಗಠಾಣ ಬಳಿ ಬೈಕ್ ಅಪಘಾತ: ಕನ್ನಡಪರ ಹೋರಟಗಾರ ನಿಧನ

223

ಪ್ರಜಾಸ್ತ್ರ ಸುದ್ದಿ

ವಿಜಯಪುರ: ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಕನ್ನಡಪರ ಹೋರಾಟಗಾರ ಮೃತಪಟ್ಟ ಘಟನೆ ತಾಲೂಕಿನ ನಾಗಠಾಣ ಹತ್ತಿರ ನಡೆದಿದೆ. ಗುರವಾರ ರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕನ್ನಡಪರ ಹೋರಾಟಗಾರ ಪ್ರಕಾಶ ಕುಂಬಾರ(56) ಮೃಪಟ್ಟ ದುರ್ದೈವಿ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನು ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ವಿಜಯಪುರ ನಗರದ ಕೋರ್ಟ್ ಎದುರು ಗುರುವಾರ ರಾತ್ರಿ ನಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!