ಚಿತ್ರದುರ್ಗದಲ್ಲಿ ಭೀಕರ ಅಪಘಾತಕ್ಕೆ ಬಾಲಕರಿಬ್ಬರ ಸಾವು

195

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಎತ್ತಿನ ಗಾಡಿಗೆ ಬೈಕ್ ಡಿಕ್ಕಿಯಾಗಿ ಬಾಲಕರಿಬ್ಬರು ಮೃತಪಟ್ಟ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ. ಚಳ್ಳಕೆರೆ-ಪಾವಗಡದ ಚೌಳೂರು ಗೇಟ್ ಹತ್ತಿರ ಅಪಘಾತ ಸಂಭವಿಸಿದೆ. ಅಲ್ಲಾಪುರದ ಕಿರಣ್(15) ಹಾಗೂ ದಿಲೀಪ್(14) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಪಟಾಕಿ ತೆರಲೆಂದು ಬೈಕ್ ಮೇಲೆ ಹೊರಟಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಎತ್ತಿನ ಗಾಡಿ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರಿಬ್ಬರು ಒಂದೇ ಕುಟುಂಬದವರು ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!