ಬೈಕ್ ಗಳ ನಡುವೆ ಅಪಘಾತ, ಇಬ್ಬರ ಸಾವು

193

ಪ್ರಜಾಸ್ತ್ರ ಸುದ್ದಿ

ತುಮಕೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಗುಬ್ಬಿ ತಾಲೂಕಿನ ಚೇಳೂರು-ಬಿದರೆ ರಸ್ತೆಯ ಸಾಲುಮರದ ತಿಮ್ಮಕ್ಕ ಪಾರ್ಕ್ ಬಳಿ ನಡೆದಿದೆ. ಅಭಿಷೇಕ್, ಚಲುವರಾಜು ಮೃತ ದುರ್ದೈವಿಗಳು.

ಅಪಘಾತದಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!