ಬೈಕ್ ಗಳ ನಡುವೆ ಅಪಘಾತ: ಮೂವರಿಗೆ ಗಾಯ

267

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ಕಾಲೇಜು ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿದ್ದಾರೆ.

ಮಧ್ಯಾಹ್ನ ಸುಮಾರು 2.40ರ ಸಮಯದಲ್ಲಿ ಮುಂದೆ ಸಾಗುತ್ತಿದ್ದ ಟಿವಿಎಸ್ ಎಕ್ಸಲ್ ಬೈಕಿಗೆ ಹಿಂಬದಿಯಿಂದ ಬಂದ ಹೊಂಡಾ ಕಂಪನಿಯ ಬೈಕ್ ವೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಓರ್ವ ಮಹಿಳೆಯ ಕೈಗೂ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ.

ಗಾಯಾಳಗಳನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದರು. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!