ಬೈಕ್ ಅಪಘಾತ, ನಟಿ ಅರುಂಧತಿ ಸ್ಥಿತಿ ಗಂಭೀರ

158

ಪ್ರಜಾಸ್ತ್ರ ಸಿನಿಮಾ ಡೆಸ್ಕ್

 ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟಿ ಅರುಂಧತಿ ನಾಯರ್ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಹೋದರನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮಾರ್ಚ್ 14ರಂದು ಚೆನ್ನೈ-ಕೋವಲಂ ಹೈವೇನಲ್ಲಿ ಅಪಘಾತವಾಗಿದೆ. ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಆದರೆ, ಕುಟುಂಬಸ್ಥರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇದೀಗ ಸಹೋದರಿ ಆರತಿ ನಾಯರ್ ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್ ನಲ್ಲಿ ಅಪಘಾತದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಪತ್ರಿಕೆ ಹಾಗೂ ಟಿವಿಗಳಲ್ಲಿ ಬಂದಿರುವ ಸುದ್ದಿ ಸತ್ಯ. ಮೂರು ದಿನಗಳ ಹಿಂದೆ ಸಹೋದರಿಗೆ ಅಪಘಾತವಾಗಿದೆ. ತಿರುವನಂತಪುರಂನ ಅನಂತಪುರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಜೀವನ್ಮರಣ ಹೋರಾಟ ನಡೆಸಿದ್ದಾರೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!