Search

ಬೈಕ್ ಅಪಘಾತ, ವ್ಯಕ್ತಿಗೆ ಗಂಭೀರ ಗಾಯ

421

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ಕಲಕೇರಿ ರಸ್ತೆಯಲ್ಲಿನ ಬ್ಯಾಕೋಡ ಗ್ರಾಮದ ಮಾರ್ಗದಲ್ಲಿ ಗುರುವಾರ ರಾತ್ರಿ ಬೈಕ್ ಅಪಘಾತವಾಗಿದೆ. ಅಪರಿಚಿತ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ನಬಿಸಾಬ್ ಲಾಲಸಾಬ್ ಬಳಕೋಡ(55) ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುರುವಾರ ರಾತ್ರಿ ಸುಮಾರು 8.30 ರಿಂದ 9ರ ನಡುವೆ ಈ ಅಪಘಾತ ಸಂಭವಿಸಿದ್ದು, ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದ ಕಾರಣಕ್ಕೆ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!