ಶಾಸಕ ಚವ್ಹಾಣ ದೊಡ್ಡಪ್ಪನ ಮಗ ಬೈಕ್ ಅಪಘಾತದಲ್ಲಿ ಸಾವು

346

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ‌ ಡಿಕ್ಕಿ ಸಂಭವಿಸಿ, ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ, ತಾಲೂಕಿನ ಹಿಟ್ನಹಳ್ಳಿ ಬಳಿ ನಡೆದಿದೆ. ಮೃತ ವ್ಯಕ್ತಿ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಅವರ ದೊಡ್ಡಪ್ಪನ ಮಗ ಅನ್ನೋದು ತಿಳಿದು ಬಂದಿದೆ.

ಗಂಗಾರಾಮ‌ ಚವ್ಹಾಣ (59) ಮೃತ ದುರ್ದೈವಿ. ಇನ್ನೊಂದು ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!