ಸಿಂದಗಿಯಲ್ಲಿ ಅಪಘಾತ: ಬೈಕ್ ಸವಾರ ಸಾವು

371

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಹತ್ತಿರ ಸೋಮವಾರ ಸಂಜೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮಲಘಾಣ ಗ್ರಾಮದ ಮಹಿಬೂಬ್ ಮುಕ್ತುಂಸಾಬ್ ವಾಲೀಕಾರ(32) ಮೃತ ದುರ್ದೈವಿ.

ಗಬಸಾವಳಗಿಯಲ್ಲಿನ ತನ್ನ ಪತ್ನಿಯ ಮನೆಗೆ ಬೈಕ್ ಮೇಲೆ ತೆರಳುತ್ತಿದ್ದಾಗ ಪಕ್ಕದ ರಸ್ತೆ ತಿರುವಿನ ಮಾರ್ಗಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಿಂದಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.




Leave a Reply

Your email address will not be published. Required fields are marked *

error: Content is protected !!