ಬೈಕ್ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯ

288

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಬೈಕ್‌ ಸವಾರನ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆದ ಪರಿಣಾಮ‌ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕನ್ನೊಳ್ಳಿ ಕ್ರಾಸ್ ಹತ್ತಿರ ನಡೆದಿದೆ. ಕಾಶಿನಾಥ ಹಾಗೂ ಇಲಾಯಿ ಬಾಗವಾನ್ ಗಾಯಗೊಂಡಿರುವ ಬೈಕ್ ಸವಾರು.

ಈ ಅಪಘಾತಕ್ಕೆ ಅತೀ ವೇಗವೇ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗಾಯಗೊಂಡಿರುವ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!