ಶಿವಣಗಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಸಾವು

499

ಪ್ರಜಾಸ್ತ್ರ ಸುದ್ದಿ

ವಿಜಯಪುರು: ತಾಲೂಕಿನ ಶಿವಣಗಿ ಗ್ರಾಮದ ಬಳಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬುಧವಾರ ರಾತ್ರಿ ಸುಮಾರು 9 ಗಂಟೆಯ ಸಮಯದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾನೆ.

ಅಬ್ದುಲ್ ವಾಲೀಕಾರ್ ಮೃತ ಬೈಕ್ ಸವಾರ ಎಂದು ತಿಳಿದು ಬಂದಿದೆ. ಇನ್ನೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಲ್ಲದೇ, ಅಪರಿಚಿತ ವಾಹನ ಸವಾರ ವಾಹನದ ಸಮೇತ ಪರಾರಿಯಾಗಿದ್ದಾನೆ. ಹೀಗಾಗಿ ಅಪಘಾತ ಹೇಗಾಯ್ತು ಅನ್ನೋದು ಸಧ್ಯಕ್ಕೆ ತಿಳಿದು ಬಂದಿಲ್ಲ. ಈ ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




Leave a Reply

Your email address will not be published. Required fields are marked *

error: Content is protected !!