ಎಎಸ್ಪಿ ಚೇತರಿಕೆ: ಎಸ್ಪಿ ಅಗರ್ವಾಲ್

428

ವಿಜಯಪುರ: ಕರ್ತವ್ಯ ನಿರತ ಎಎಸ್ಪಿಗೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿದೆ. ಅವರಿಗೆ ನಗರದ ಬಿಎಲ್ ಡಿಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್ಪಿ ಅನುಪಮ ಅಗರ್ವಾಲ್ ತಿಳಿಸಿದ್ದಾರೆ.

ಈ ಬಗ್ಗೆ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಎಎಸ್ಪಿ ಡಾ.ರಾಮ ಅರಸಿದ್ದಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅಲ್ಲದೇ, ಬೈಕ್ ಸವಾರ ಅಹ್ಮದ ಗುಣಕಿನ್ನು ಬಂಧಿಸಿ 279, 338 IPC ಹಾಗೂ 187 ಐಎಂವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!