ವಿಜಯಪುರದಲ್ಲಿ ಖತರ್ನಾಕ್ ಬೈಕ್ ಕಳ್ಳನ ಬಂಧನ

342

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಮಹಾಲ್ ಐನಾಪುರ ಗ್ರಾಮದ ಬಸ್ ನಿಲ್ದಾಣದ ಹತ್ತಿರ, ಬೈಕ್ ಕಳ್ಳ ವಿಷ್ಣು ಶಿವಣ್ಣ ನಂದ್ಯಾಳನನ್ನು ಬಂಧಿಸಲಾಗಿದೆ.

ಈತನ ಬಳಿಯಿದ್ದ ವಿವಿಧ ಕಂಪನಿಯ 2.50 ಲಕ್ಷ ಮೌಲ್ಯದ 6 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಪಿಐ ಸಂಗಮೇಶ ಪಾಲಭಾವಿ ನೇತೃತ್ವದ ತಂಡ ವಿಷ್ಣುನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!