ಗುಮ್ಮಟನಗರಿಯಲ್ಲಿ ಬೈಕ್-ಟಿಪ್ಪರ್ ಅಪಘಾತದಲ್ಲಿ ಓರ್ವ ಸಾವು

131

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಜೆಎಸ್ಎಸ್ ಆಸ್ಪತ್ರೆ ಹತ್ತಿರ ನಡೆದಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಹರೀಶ ಎಂಬಾತ ಮೃತ ದುರ್ದೈವಿ ಎನ್ನಲಾಗುತ್ತಿದೆ. ಗಾಯಾಳುವಿನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಿಲ್ಲ. ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಟಿಪ್ಪರ್ ಸಹ ಪಲ್ಟಿಯಾಗಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!